ಧರ್ಮಸ್ಥಳ:ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ವ್ಯಾಪ್ತಿಯಲ್ಲಿ ವರದಿಯಾಗಿದೆ.

ನ.23, 2025ರಂದು ಬೆಳಿಗ್ಗೆ ಧರ್ಮಸ್ಥಳ ಗ್ರಾಮದ ನಿವಾಸಿ ರಾಘವ (54) ಅವರು ನದಿಯಲ್ಲಿ ತೇಲಿ ಬರುವ ತೆಂಗಿನಕಾಯಿಗಳನ್ನು ಹೆಕ್ಕಲು ನೇತ್ರಾವತಿ ಸೇತುವೆಯ ಕೆಳಭಾಗಕ್ಕೆ ತೆರಳಿದ್ದ ಸಂದರ್ಭ, ನೀರಿನಲ್ಲಿ ಸುಮಾರು 55 ರಿಂದ 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿರುವುದು ಕಾಣಿಸಿಕೊಂಡಿದೆ. ಮೃತದೇಹ ಸಂಪೂರ್ಣ ಕುಗ್ಗಿ ಕೊಳೆತ ಸ್ಥಿತಿಯಲ್ಲಿದ್ದು ಗುರುತು ಪತ್ತೆಹಚ್ಚಲು ಸಾಧ್ಯವಾಗದ ರೀತಿಯಲ್ಲಿ ಇರುವುದು ಎಂದು ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ 60/2025ರಂತೆ, ಬಿ.எನ್.ಎಸ್.ಎಸ್. 2023ರ ಕಲಂ 194ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!