ಪುತ್ತೂರು: ಪಾಣಾಜೆ ನಿವಾಸಿ ಪ್ರೇಮ್ರಾಜ್ ಅವರ ದೂರಿನಂತೆ ನ.29ರಂದು ಬೆಳಿಗ್ಗೆ ಜಾನುವಾರು ಕಳ್ಳತನ ಹಾಗೂ ಅಕ್ರಮ ಸಾಗಾಟಕ್ಕೆ ಸಂಬಂಧಿಸಿದ ಘಟನೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಕೆಎ 52 4889 ನೋಂದಣಿಯ ಇನೋವಾ ಕಾರಿನಲ್ಲಿ ನಾಲ್ಕು ಕರುಗಳು ಹಾಗೂ ಒಂದು ದನವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಮಧ್ಯದಲ್ಲಿ ವಾಹನ ದುರಸ್ತಿಗೀಡಾಗುತ್ತಿದ್ದಂತೆಯೇ, ವಾಹನದಲ್ಲಿದ್ದವರು ಜಾನುವಾರುಗಳನ್ನು ಪುತ್ತೂರು ನರಿಮೊಗರು ಪ್ರದೇಶದ ನಡುರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಸ್ಥಳೀಯರ ಸಹಕಾರದಿಂದ ಪಿರ್ಯಾದಿದಾರರು ಜಾನುವಾರುಗಳನ್ನು ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿದ್ದರು.

ಘಟನೆಯ ತನಿಖೆ ಕೈಗೊಂಡ ಪೊಲೀಸರು ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಎಂಬ ಇಬ್ಬರನ್ನು ಅರೆಸ್ಟ್ ಮಾಡಿದ್ದು, ಕೃತ್ಯಕ್ಕೆ ಬಳಸಿದ ಇನೋವಾ ಕಾರನ್ನೂ ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಜಾನುವಾರು ಸಾಗಾಟದ ಆರೋಪಕ್ಕೆ ಸಂಬಂಧಿಸಿದಂತೆ ಅ.ಕ್ರ 117/2025ರಂತೆ ಪ್ರಕರಣ ದಾಖಲಾಗಿ, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ 4, 5, 12ನೇ ಕಲಂಗಳು, ಜೊತೆಗೆ BNS 303(1) ಮತ್ತು BNSS 106ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!