ಮಂಗಳೂರು: ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ವಿಧಾನ ಪರಿಷತ್ ಸದಸ್ಯ ಹಾಗೂ ಹಿರಿಯ ವಕೀಲ ಐವನ್ ಡಿ’ಸೋಜಾ ಅವರ ನೇತೃತ್ವದ ವಕೀಲರ ನಿಯೋಗವು ಬುಧವಾರ (ಡಿ. 3) ಮಂಗಳೂರಿನ ಸರ್ಕ್ಯೂಟ್ ಹೌಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ, ಕರಾವಳಿ ಜನತೆಗೆ ನ್ಯಾಯ ಪಡೆಯುವಲ್ಲಿ ಅನುಕೂಲವಾಗುವ ಹೈಕೋರ್ಟ್ ಪೀಠ ಮಂಗಳೂರಿನಲ್ಲಿ ಅಗತ್ಯವಿದೆಯೆಂಬ ವಿಚಾರವನ್ನು ನಾನು ಮನಗಂಡಿದ್ದೇನೆ ಎಂದು ತಿಳಿಸಿದರು. “ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಾಧೀಶರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ,” ಎಂದು ಭರವಸೆ ನೀಡಿದರು.

ವಕೀಲರ ನಿಯೋಗದಲ್ಲಿ ಹಿರಿಯ ವಕೀಲರು ಟಿ.ಎನ್. ಪೂಜಾರಿ, ನೂರುದ್ದೀನ್ ಸಾಲ್ಮರ, ಎಂ.ಆರ್. ಬಲ್ಲಾಳ್, ಯಶವಂತ ಮರೋಲಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ರಾಘವೇಂದ್ರ, ದ.ಕ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ. ಜಗನ್ನಾಥ ರೈ, ಉಪಾಧ್ಯಕ್ಷ ಮೋನಪ್ಪ, ಕಾರ್ಯದರ್ಶಿ ಚಿನ್ಮಯ ರೈ, ಸಹ ಕಾರ್ಯದರ್ಶಿ ಮಮತಾ ಸುವರ್ಣ, ಮೂಡಬಿದ್ರೆಯ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಮಹಮ್ಮದ್ ಅಸ್ಕರ್ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಯ ವಿವಿಧ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!