
ಸುಳ್ಯ :ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಹಾಗೂ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜಿನ ವಿದ್ಯಾರ್ಥಿನಿ ಪೂಜಾ ಇಲಿಪಾಷಾಣ ಸೇವಿಸಿದ ಮೂರು ದಿನಗಳ ಬಳಿಕ ಚಿಕಿತ್ಸೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೂರು ದಿನಗಳ ಹಿಂದೆ ಪೂಜಾ ಇಲಿಪಾಷಾಣ ಸೇವಿಸಿದ್ದರಿಂದ ಅಸ್ವಸ್ಥಗೊಂಡಿದ್ದರು. ನಂತರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೆ ಅವರನ್ನು ಎರಡು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಮತ್ತು ಬಂಧುಗಳನ್ನು ಅಗಲಿದ್ದಾರೆ.






