ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದು, ಅವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಕೃಷ್ಣ ಆಳ್ವ, ನರ್ಸಪ್ಪ ಪೂಜಾರಿ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಉದಯ್ ಕುಮಾರ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಕಾರ್ಯಕ್ರಮವನ್ನು ಅಲಂಕರಿಸಿದರು.
ಅತಿಥಿಗಳು ಅಶೋಕ್ ಕುಮಾರ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿ ಯಶಸ್ವಿ ಸೇವಾ ಅವಧಿಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!