ಮಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಸುಮಾರು 50 ಲಕ್ಷ ಮೌಲ್ಯದ 517.76 ಗ್ರಾಂ ಎಂ.ಡಿ.ಎಂ.ಎ. ಡ್ರಗ್ಸ್ ನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಕುಂದಾಪುರದ ಮೊಹಮ್ಮದ್ ಶಿಯಾಬ್, ಉಳ್ಳಾಲದ ಮೊಹಮ್ಮದ್ ನೌಷದ್ ಮಂಗಳೂರಿನ ಇಮ್ರಾನ್ ಮತ್ತು ಬಂಟ್ವಾಳದ ನಿಸಾರ್ ಅಹಮ್ಮದ್ ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಸಿ.ಸಿ.ಬಿ. ಘಟಕದ ಎ.ಸಿ.ಪಿ. ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಸಿ.ಸಿ.ಬಿ.ಯ ತಂಡವು ಖಚಿತ ಮಾಹಿತಿ ಮೇರೆಗೆ ಇಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಾಮ್ ಶೆಟ್ಟಿ ಕನ್ವಿನ್ಷನ್ ಹಾಲ್ ಬಳಿ ಆರೋಪಿಗಳು ಕಾರಿನಲ್ಲಿ ಮಾದಕವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು, ಈ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ಸುಮಾರು 50 lakh ಮೌಲ್ಯದ 517.76 ಗ್ರಾಂ ಎಂ.ಡಿ.ಎಂ.ಎ. ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ 10 ಲಕ್ಷ ಮೌಲ್ಯದ ಕಾರು ಹಾಗೂ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಸದ್ರಿ ಮಾದಕ ವಸ್ತುವನ್ನು ಆರೋಪಿತರು ಬೆಂಗಳೂರಿನಲ್ಲಿ ಒಬ್ಬ ನೈಜೀರಿಯಾ ದೇಶದ ವ್ಯಕ್ತಿಯಿಂದ ತಂದು ಮಂಗಳೂರು ನಗರದ್ಯಾಂತ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಪೂರೈಕೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದರು. ಮುಲ್ಕಿ ಠಾಣೆಯಲ್ಲಿ ಆರೋಪಿಗಳ ವಿರುದ್ದ ಪ್ರಕರಣ ದಾಖಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಪೊಲೀಸ್ ಆಯುಕ್ತ ಸುದೀರ್ ಕುಮಾರ್ ರೆಡ್ಡಿ ಜನರು ಡ್ರಗ್ಸ್ ಕೇಸ್ ನಲ್ಲಿ ಜಾಮೀನು ತೆಗೆದುಕೊಂಡ ಬರಬಹುದು ಎಂದು ಕೊಂಡಿದ್ದಾರೆ. ಆದರೆ ಡ್ರಗ್ಸ್ ಕೇಸ್ ನಲ್ಲಿ ಸಿಕ್ಕಿಹಾಕಿಕೊಂಡರೆ ಕನಿಷ್ಠ 15 ರಿಂದ 20 ವರ್ಷ ಜೈಲು ಶಿಕ್ಷೆ ಆಗಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!