
ಪುತ್ತೂರು:ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17 ವರ್ಷ ವಯೋಮಿತಿಯ ಬಾಲಕರು ಮತ್ತು ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ–2025-26ರಲ್ಲಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಜೆ.ಎಂ. ಕೀರ್ತಿ ಪ್ರಭಾವಿ ಪ್ರದರ್ಶನ ನೀಡಿ, ಹರ್ಡಲ್ಸ್ ಮತ್ತು ಎತ್ತರ ಜಿಗಿತ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆ ಕುರಿತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಆಶಾ ಬೆಳ್ಳಾರೆ ಮಾತನಾಡಿ, “ಎತ್ತರ ಜಿಗಿತದಲ್ಲಿ ರಾಜ್ಯಕ್ಕೆ ಚಿನ್ನ ತಂದುಕೊಟ್ಟಿದ್ದ ಕೀರ್ತಿ, ಈ ಬಾರಿ ಹರ್ಡಲ್ಸ್ ಸಹಿತ ಎರಡು ವಿಭಾಗಗಳಲ್ಲಿ ಚಿನ್ನದ ಪದಕ ಗೆದ್ದು ಕೂಟದ ದಾಖಲೆ ನಿರ್ಮಿಸಿದ್ದಾರೆ.






