
ಪುತ್ತೂರು: ನೆಹರುನಗರ ಪಡ್ಡಾಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪ್ಪಾಲ್ ಅವರು ಇಂದು (ಡಿ.12) ಬೆಳಿಗ್ಗೆ ಅಕಾಲಿಕವಾಗಿ ನಿಧನ ಹೊಂದಿದ್ದಾರೆ.
ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣದ ಚಿಕಿತ್ಸೆ ನೀಡಿದರೂ ಜೀವ ಉಳಿಯಲಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ದಾಮೋದರ ನೆಲಪ್ಪಾಲ್ ಅವರು ಕಾಂಗ್ರೆಸ್ ಪಕ್ಷದ ವಿವಿಧ ಚಟುವಟಿಕೆಗಳಲ್ಲಿ ಸದಾ ಮುಂಚೂಣಿಯಲ್ಲಿ ತೊಡಗಿಸಿಕೊಂಡಿದ್ದವರು.






