ಪುತ್ತೂರು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು; ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ; ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು 2025–26ರ ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನಿಶಾ ಪಿ. ಎಸ್. ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಈ ಸಾಧನೆಯೊಂದಿಗೆ ನಿಶಾ ಅವರು ತುಮಕೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರಿಗೆ ಶಿಕ್ಷಕರಾದ ರಮೇಶ್ ಶಿರ್ಲಾಲ್ ತರಬೇತಿ ನೀಡಿದ್ದರು. ನಿಶಾ ಅವರು ಸುಳ್ಯದ ಪೈಚಾರು ನಿವಾಸಿಗಳಾದ ಸುಕುಮಾರ ಪಿ.ಆರ್. ಹಾಗೂ ಪುಷ್ಪ ದಂಪತಿಯ ಪುತ್ರಿ.

ವಿದ್ಯಾರ್ಥಿನಿಯ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ಈ ಸಂದರ್ಭದಲ್ಲಿ ಪ್ರದರ್ಶನ ಕಲಾ ಸಂಘದ ಸುಮನಾ ರಾವ್, ಉಷಾ ರೈ, ಅವಿನಾ ಮಾಡ್ತಾ, ಡಾ. ಲತಾ ಹಾಗೂ ಸಂದೇಶ್ ಜಾನ್ ಲೋಬೋ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!