ಗದಗ (Gadag) ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ (Bomb Threat) ಹಾಕಲಾಗಿದೆ. ಪಾಕ್ನ ಐಎಸ್ಐ ಮತ್ತು ಎಲ್ಟಿಟಿಇ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್ಗಳಿಂದ ಜಿಲ್ಲಾಡಳಿತ ಭವನ ಸ್ಫೋಟಿಸುವುದಾಗಿ ಕಿಡಿಗೇಡಿಗಳು ಧಮ್ಕಿ ಹಾಕಿದ್ದಾರೆ.

ಸದ್ಯ ಗದಗ ಜಿಲ್ಲಾಡಳಿತ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಶ್ವಾನದಳ, ಬಾಂಬ್ ಪತ್ತೆದಳ ಸಿಬ್ಬಂದಿ ಇಂಚಿಂಚು ತಪಾಸಣೆ ಮಾಡಿದ್ದಾರೆ.

ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ನಿಮ್ಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐದು ಬಾಂಬ್ಗಳನ್ನು ಶೀಘ್ರದಲ್ಲೇ ಸ್ಫೋಟಿಸಲಾಗುವುದು. ಪಾಕಿಸ್ತಾನ-ತಮಿಳುನಾಡು ಡಿಎಂಕೆ 2026ರ ಚುನಾವಣೆಗೆ ಗಮನವನ್ನು ಬೇರೆಡೆ ಸೆಳೆಯಲು ಬಯಸುತ್ತಿದೆ ಎಂದು ಉಲ್ಲೇಖಿಸಲಾಗಿದೆ. ಸದ್ಯ ಡಿವೈಎಸ್ಪಿ ಮುರ್ತುಜಾ ಖಾಜಿ, ಸಿಪಿಐ ಲಾಲಸಾಬ್ ಜೂಲಕಟ್ಟಿ, ಸಿದ್ದರಾಮೇಶ್, ಪಿಎಸ್ಐ ವ್ಹಿಜಿ ಪವಾರ ಸೇರಿದಂತೆ ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗಿದೆ.

ಮಂಗಳೂರಿನ ಆರ್‌ಟಿಒ ಕಚೇರಿಗೂ ಬಾಂಬ್ ಬೆದರಿಕೆ

ಅದೇ ರೀತಿಯಾಗಿ ಮಂಗಳೂರಿನ ಆರ್‌ಟಿಒ ಕಚೇರಿಗೂ ಇ-ಮೇಲ್‌ಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಮಂಗಳೂರಿನ ನೆಹರು ಮೈದಾನದ ಬಳಿಯ ಆರ್‌ಟಿಒ ಕಚೇರಿಗೆ 5 ಕಡೆ ಬಾಂಬ್‌ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಮೇಲ್ ರವಾನಿಸಲಾಗಿದೆ. ಸದ್ಯ ಆರ್‌ಟಿಒ ಕಚೇರಿಗೆ ಮಂಗಳೂರು ಪೊಲೀಸರು, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ಮಾಡಲಾಗಿದೆ.

ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ಮೇಲ್ನಲ್ಲಿ ತಮಿಳುನಾಡು ರಾಜಕೀಯ ವಿಚಾರವಾಗಿ ಕಿಡಿಗೇಡಿಗಳು ಬರೆದಿದ್ದು, ಇದು ಪಾಕಿಸ್ತಾನ ಐಎಸ್ಐ, ಎಲ್ಟಿಟಿಇಯಿಂದ ರಿಮೋಟ್ ಆಪರೇಷನ್. ತಮಿಳುನಾಡಿನ IPS ಅಧಿಕಾರಿಗಳ ಹೆಸರು ಮತ್ತು ಸಜ್ಜನ್ ಹೈದರ್ ಪಿಎಎಫ್ಗೆ ಜಿಂದಾಬಾದ್ ಎಂದು ಉಲ್ಲೇಖಿಸಿದ್ದಾರೆ.

ಬೀದರ್ ಡಿಸಿ ಕಚೇರಿಗೂ ಬಾಂಬ್ ಬೆದರಿಕೆ

ಇನ್ನು ಇತ್ತೀಚೆಗೆ ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿದ್ದೇವೆ ಅದನ್ನ ಆದಷ್ಟು ಬೇಗ ಬ್ಲಾಸ್ಟ್ ಮಾಡಲಾಗುವುದು ಎಂದು ಬೀದರ್ ಜಿಲ್ಲಾಧಿಕಾರಿ ಕಚೇರಿ ಮೇಲ್ ಐಡಿಗೆ ಅಪರಿಚಿತರ ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು.

ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದ ಹಿನ್ನಲೆ ಪೊಲೀಸರು ಹೈಅಲರ್ಟ್ ಆಗಿ, ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆಸಿದ್ದರು. ಕಚೇರಿಯ ಎಲ್ಲಾ ಸಿಬ್ಬಂದಿಗಳನ್ನ ಹೊರಹಾಕಿ, ಪೊಲೀಸರು ಪರಿಶೀಲನೆ ಮಾಡಿದ್ದರು. ಸ್ಥಳಕ್ಕೆ ಡಾಗ್‌ ಸ್ಕ್ವಾಡ್, ಅಗ್ನಿಶಾಮಕ ಸಿಬ್ಬಂದಿ, ಪೊಲೀಸರಿಂದ ಎಲ್ಲಾ ಕಡೆ ತಪಾಸಣೆ ಮಾಡಿದ್ದರು. ಸುಮಾರು ಒಂದು ಗಂಟೆಗಳ ಕಾಲ ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಸಂದೇಶ ಇರಬಹುದೆಂದು ಪರಿಶೀಲನೆ ಕೈಬಿಟ್ಟಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!