ಕೆಯ್ಯೂರು ಜಯಕರ್ನಾಟಕ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಮತ್ತು ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಭಜನಾ ಸೇವೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡು ಬಳಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನೆರವೇರಿಸಲಾಯಿತು. ನಂತರ ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯಕುಮಾರ್ ಜಿ.ಕೆ ಅವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಶಶಿಧರ ಎಂ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಸಹಾಯಕ ಪ್ರಾಧ್ಯಾಪಕಿ ಹರಿಣಿ ಪುತ್ತೂರಾಯ, ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಶರತ್ ಕುಮಾರ್ ಮಾಡಾವು, ಪುತ್ತೂರು ಜನಜಾಗೃತಿ ವೇದಿಕೆಯ ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಕೆಯ್ಯೂರು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಕೆ. ಜಯರಾಮ ರೈ, ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಸ್.ಬಿ. ಜಯರಾಮ ರೈ ಬಳಜ್ಜ, ಜಯಕರ್ನಾಟಕ ಸಭಾಭವನದ ಸಂಚಾಲಕ ದಿವಾಕರ ರೈ ಸಣಂಗಳ ಹಾಗೂ ಜನಜಾಗೃತಿ ವಲಯಾಧ್ಯಕ್ಷ ಶ್ಯಾಮ್ ಸುಂದರ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.
ನಳಿನಿ ಪ್ರಾರ್ಥನೆ ಸಲ್ಲಿಸಿ, ಯುವರಾಜ ಪೂಂಜಾ ಸ್ವಾಗತಿಸಿದರು. ವಾರಿಜ ವಂದನಾರ್ಪಣೆ ನೆರವೇರಿಸಿದರು. ಮೇಲ್ವಿಚಾರಕಿ ಶುಭಾವತಿ ಪಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಕಾರ್ಯಕ್ರಮದಲ್ಲಿ ಕೆದಂಬಾಡಿ ವಲಯದ ದೇರ್ಲ, ದೇವಿನಗರ, ಬೊಳಿಕ್ಕಳ, ಪಾಲ್ತಾಡಿ, ಕೊಳ್ತಿಗೆ, ಪೆರ್ಲಂಪಾಡಿ, ಮೊಗಪ್ಪೆ ಹಾಗೂ ಮಣಿಕ್ಕರ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!