
ಮಂಗಳೂರು; ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಕಂಕನಾಡಿ-ಪಂಪೈಲ್ ಹಳೆಯ ರಸ್ತೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಪಡಿಯಪ್ಪ ಮೃತರು. ಮೃತದೇಹದ ಮೇಲೆ ಗಾಯಗಳು ಕಂಡು ಬಂದಿದ್ದು, ಸೂಕ್ತ ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿರುವ ಇವರು ಶನಿವಾರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದರು. ಬಳಿಕ ನಾಪತ್ತೆಯಾಗಿದ್ದರು. ಅದರಂತೆ ಮನೆಮಂದಿ, ಕುಟುಂಬದ ಇತರ ಸದಸ್ಯರು ಪಡಿಯಪ್ಪರಿಗಾಗಿ ಹುಡುಕಾಟ ನಡೆಸಿದ್ದರು.
ಸೋಮವಾರ ಸಂಜೆಯ ವೇಳೆಗೆ ಚರಂಡಿಯಲ್ಲಿ ಪಡಿಯಪ್ಪರ ಮೃತದೇಹ ಪತ್ತೆಯಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ






