ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಬುಧವಾರ ಅಮಾನತು ಮಾಡಲಾಗಿದೆ.

ಮರ್ಯಾದೆಗೇಡು ಹತ್ಯೆ-ತಂದೆ ಬಂಧನಹುಬ್ಬಳ್ಳಿಯಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಮೂವರ ವಶ

ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೆಬಲ್ ಸಂಗಮೇಶ ಸಾಗರ ಮತ್ತು ಬೀಟ್ ಕಾನ್‌ಸ್ಟೆಬಲ್‌ ಚಂದ್ರಕಾಂತ ರಾಥೋಡ ಅಮಾನತಾಗಿದ್ದಾರೆ.

ಕೃತ್ಯದ ಕುರಿತು ಸರಿಯಾದ ಮಾಹಿತಿ ನೀಡದ ಕಾರಣ ಇಲಾಖೆಯ ಆಂತರಿಕ ತನಿಖೆ ಕಾಯ್ದಿರಿಸಿ, ಮುಂದಿನ ಅದೇಶದವರೆಗೆ ಅಮಾನತು ಮಾಡಿ ಆದೇಶಿಸಿರುವುದಾಗಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಂಗಳವಾರ ತಡರಾತ್ರಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಸಪ್ಪ ಸೋಲಾರಾಗೊಪ್ಪ ಮತ್ತು ಅನಿಲಗೌಡ ಪಾಟೀಲ ಬಂಧಿತರು. ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!