ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 53/2025, ಕಲಂ 306 ಐಪಿಸಿ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಳ್ಯ ತಾಲೂಕಿನ ಐವರ್ನಾಡು ನಿವಾಸಿ ಶಿವಪ್ರಸಾದ್ (41) ಎಂಬಾತನಿಗೆ ಮಾನ್ಯ ಎ.ಎಸ್.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯ, ಪುತ್ತೂರು ಇದರ ನ್ಯಾಯಾಧೀಶರಾದ ಶ್ರೀ ದೇವರಾಜ್ ಅವರು ದೋಷಿ ಎಂದು ತೀರ್ಪು ನೀಡಿ, 3 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ರೂ.10,000 ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.
ಈ ಪ್ರಕರಣದ ತನಿಖೆಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ ಸುಷ್ಮಾ ಬಂಡಾರಿ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತ್ವರಿತವಾಗಿ ಮಾನ್ಯ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಚೇತನಾದೇವಿ ಅವರು ಸಮರ್ಥವಾಗಿ ವಾದ ಮಂಡನೆ ನಡೆಸಿ ಪ್ರಕರಣವನ್ನು ಯಶಸ್ವಿಯಾಗಿ ಮುನ್ನಡೆಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!