
ಬಂಟ್ವಾಳ, ಡಿ.24: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಲಿ ವಿಟ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೋಶಾಧಿಕಾರಿಯಾಗಿ ಚಂದ್ರಶೇಖರ ಕಲ್ಮಲೆ, ಉಪಾಧ್ಯಕ್ಷರಾಗಿ ರಮೇಶ್ ಕೆ. ಪುಣಚ(ವಿಷ್ಣುಗುಪ್ತ ಪುಣಚ) ಹಾಗೂ ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ತಲಪಾಡಿ ಆಯ್ಕೆಯಾದರು.
ಕಾರ್ಯಕಾರಿ ಸಮಿತಿಗೆ ವೆಂಕಟೇಶ್ ಬಂಟ್ವಾಳ, ರತ್ನದೇವ್ ಪುಂಜಾಲಕಟ್ಟೆ, ಉದಯಶಂಕರ ನೀರ್ಪಾಜೆ, ವಾಮನ ಪೊಳಲಿ ಹಾಗೂ ಮೌನೇಶ ವಿಶ್ವಕರ್ಮ ಆಯ್ಕೆಯಾದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾರ್ಗದರ್ಶನದಲ್ಲಿ ಮಂಗಳವಾರ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿ ಸುರೇಶ ಡಿ. ಪಳ್ಳಿ ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿಯನ್ನು ಘೋಷಿಸಿದರು.
ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಜಿಲ್ಲಾ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್. ಅಭಿನಂದಿಸಿದರು.
ಸಹಾಯಕ ಚುನಾವಣಾಧಿಕಾರಿ ಜಯಶ್ರೀ ನವೀನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸಂದೀಪ್ ಸಾಲ್ಯಾನ್, ಪತ್ರಕರ್ತರಾದ ಗಣೇಶ್ ಪ್ರಸಾದ್ ಪಾಂಡೇಲು, ಕಿಶೋರ್ ಪೆರಾಜೆ, ಕಿರಣ್ ಸರಪಾಡಿ, ಹರೀಶ್ ಮಾಂಬಾಡಿ ಯಾದವ ಅಗ್ರಬೈಲು ಮತ್ತಿತರರು ಉಪಸ್ಥಿತರಿದ್ದರು.






