ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಂತೆ ೩೦೦ ಬೆಡ್‌ನ ಆಸ್ಪತ್ರೆ ಮಂಜೂರಾಗಿದ್ದು ಅದರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

ಶುಕ್ರವಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮೊಹ್ಸಿನ್‌ರವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈಗಾಗಲೇ ಒಂದು ಹಂತದ ಪ್ರಕ್ರಿಯೆ ಮುಕ್ತಾಯವಾಗಿದೆ. ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಪ್ರಮುಖವಾಗಿ ಆಗಬೇಕಾದ ೩೦೦ ಬೆಡ್ ಆಸ್ಪತ್ರೆ ನಿರ್ಮಾಣ ಕಾರ್ಯ ಶೀಘ್ರವೇ ನಡೆಯಬೇಕಿದೆ. ಆಸ್ಪತ್ರೆ ನಿರ್ಮಾಣವಾದ ಬಳಿಕವಷ್ಟೆ ಮೆಡಿಕಲ್ ಕಾಲೇಜು ಪ್ರಕ್ರಿಯೆಗೆ ದೊಡ್ಡ ಮಟ್ಟದ ಚಾಲನೆ ದೊರೆಯಲಿರುವ ಕಾರಣ ಆಸ್ಪತ್ರೆ ಕಟ್ಟಡ ನಿರ್ಮಾಣದ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರ ಮುಗಿಸುವಂತೆ ಕೇಳಿಕೊಂಡಿದ್ದಾರೆ.

ಕೆಲದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮೆಡಿಕಲ್ ಕಾಲೇಜು ನಿರ್ಮಾಣವಾಗಲಿರುವ ಬನ್ನೂರಿನಲ್ಲಿರುವ ನಿಗಧಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತೆರಳಿದ್ದು ಜಾಗಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ ವರದಿಯನ್ನು ಒಪ್ಪಿಸಿದ್ದರು. ಆಸ್ಪತ್ರೆಯ ಟೆಂಡರ್ ಪ್ರಕ್ರಿಯೆ ಶೀಘ್ರ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!