
ಪುತ್ತೂರು :ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ನಡೆಸಿದ 2024–25ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ಪ್ರಗತಿ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕಾಲೇಜಿನ ಬಿ.ಎಸ್‌ಸಿ (OT & AT) ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದು, ಕು. ಕೀರ್ತನಾ ಕೆ ಹಾಗೂ ಕು. ಪಲ್ಲವಿ ಡಿ ಅವರು ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅದೇ ರೀತಿ ಬಿ.ಎಸ್‌ಸಿ (ಎಂಎಲ್‌ಟಿ) ವಿಭಾಗದಲ್ಲಿ ಕು. ಕತೀಜತ್ ಸನಾ ಶೇ.90 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಇತರ ಎಲ್ಲ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಈ ಸಾಧನೆಗೆ ಕಾಲೇಜಿನ ವಿದ್ಯಾರ್ಥಿಗಳನ್ನು ಹಾಗೂ ಅಧ್ಯಾಪಕ ವೃಂದವನ್ನು ಸಂಸ್ಥೆಯ ಅಧ್ಯಕ್ಷ ಡಾ. ಯು. ಶ್ರೀಪತಿ ರಾವ್, ಟ್ರಸ್ಟಿಗಳಾದ ಡಾ. ಸುಧಾ ಎಸ್. ರಾವ್, ಡಾ. ಸ್ಮಿತಾ ಎಸ್. ರಾವ್, ಡಾ. ಅಭೀಷ್ ಹೆಗ್ಡೆ, ಆಡಳಿತಾಧಿಕಾರಿ ಶ್ರೀಮತಿ ಪ್ರೀತಾ ಹೆಗ್ಡೆ ಹಾಗೂ ಮಾತೃ ಸಂಸ್ಥೆಯಾದ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.






