ಬೆಂಗಳೂರಲ್ಲಿಕಿರುತೆರೆ ನಟಿ ನಂದಿನಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೈರಿಯೊಂದು ಪತ್ತೆಯಾಗಿದೆ.

ಕೆಂಗೇರಿ ಪೊಲೀಸರು ಡೈರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ‘ನನಗೆ ಸರ್ಕಾರಿ ಕೆಲಸ ಇಷ್ಟ ಇಲ್ಲ, ನನಗೆ ಆಯಕ್ಟಿಂಗ್ ಅಂದರೆ ಇಷ್ಟ ಅದಕ್ಕೆ ಸೂಸೈಡ್ ಮಾಡಿಕೊಂಡೆ’ ಎಂದು ನಟಿ ನಂದಿನಿ ಡೈರಿಯಲ್ಲಿ ಉಲ್ಲೇಖಿಸಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ಕಿರುತರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂದಿನಿ ಬೆಂಗಳೂರಿನ ಆರ್.ಆರ್. ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಕನ್ನಡ, ತಮಿಳು ಸೇರಿ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದರು. ಮೂಲತ: ಕೊಟ್ಟೂರಿನವರಾದ ನಂದಿನಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ, ಮದುಮಗಳು, ಸೇರಿ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ತಮಿಳು ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!