
ಪುತ್ತೂರು: ಪುತ್ತೂರಿನ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸಭೆ ಮಂಗಳವಾರ ದೇವಳದ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ದೇವಸ್ಥಾನದ ಭವಿಷ್ಯ ಅಭಿವೃದ್ಧಿ ಯೋಜನೆಗಳು, ಸೌಕರ್ಯ ವಿಸ್ತರಣೆ, ಭಕ್ತರಿಗೆ ಅನುಕೂಲ ಕಲ್ಪಿಸುವ ವಿವಿಧ ವಿಚಾರಗಳು ಹಾಗೂ ನಿರ್ವಹಣಾ ಸಂಬಂಧಿತ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ಈಶ್ವರ ನಾಯ್ಕ, ನಳಿನಿ ಪಿ. ಶೆಟ್ಟಿ, ದಿನೇಶ್ ಕುಲಾಲ್ ಪಿ.ವಿ., ಮಹಾಬಲ ರೈ ವಳತ್ತಡ್ಕ, ಸುಭಾಸ್ ರೈ ಬೆಳ್ಳಿಪ್ಪಾಡಿ, ವಿನಯಕುಮಾರ್ ಪಿ., ಹಾಗೂ ವ್ಯವಸ್ಥಾಪಕ ಹರೀಶ್ ಕುಮಾರ್ ಉಪಸ್ಥಿತರಿದ್ದರು.
ದೇವಾಲಯದ ಸರ್ವಾಂಗೀಣ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.






