
ಪುತ್ತೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಅಲೈಡ್ ಹೆಲ್ತ್ ಸೈನ್ಸಸ್ ಕೋರ್ಸ್‌ಗಳ 2025–26ನೇ ಸಾಲಿನ ದಾಖಲಾತಿಗೆ ಅವಧಿಯನ್ನು ವಿಸ್ತರಿಸಲಾಗಿದೆ. ಇದರಂತೆ ಪುತ್ತೂರಿನ ಪ್ರಗತಿ ಆಸ್ಪತ್ರೆ ಆವರಣದಲ್ಲಿರುವ ಪ್ರಗತಿ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನಲ್ಲಿ ಉಳಿದಿರುವ ಕೆಲವೇ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ (PCMB) ಉತ್ತೀರ್ಣರಾದ ವಿದ್ಯಾರ್ಥಿಗಳು ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ಹೊಂದಿರುವ BSc MLT, BSc OT & AT, BSc MIT ಹಾಗೂ BSc EMT ಕೋರ್ಸ್‌ಗಳಿಗೆ ದಾಖಲಾತಿ ಪಡೆಯಬಹುದಾಗಿದೆ. ಇದಲ್ಲದೇ, GNM ನರ್ಸಿಂಗ್ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ BSc ಎಮರ್ಜೆನ್ಸಿ ಅಂಡ್ ಟ್ರಾಮಾ ಕೇರ್ (EMT) ಕೋರ್ಸ್‌ಗೆ ಲ್ಯಾಟರಲ್ ಎಂಟ್ರಿ ಮೂಲಕ ನೇರವಾಗಿ ದ್ವಿತೀಯ ವರ್ಷದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 99163 73471 ಅಥವಾ 86606 84495 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಾಲೇಜು ಕಚೇರಿಯನ್ನು ನೇರವಾಗಿ ಸಂಪರ್ಕಿಸುವ ಅವಕಾಶವೂ ಇದೆ.






