ಬಂಟ್ವಾಳ: ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಎಟಿಎಂ ನಗದು ಹಾಗೂ ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಶಾಖೆಯ ಜಂಟಿ ವ್ಯವಸ್ಥಾಪಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿತ ಸುಬ್ರಹ್ಮಣ್ಯಂ (30), ಪುಲುಗುಜ್ಜು ನಿವಾಸಿಯಾಗಿದ್ದು, ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯಲ್ಲಿ ಜಂಟಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಎಟಿಎಂ ಮೇಲ್ವಿಚಾರಣೆಯ ಜವಾಬ್ದಾರಿ ಇವರಿಗೆ ವಹಿಸಲಾಗಿತ್ತು. ದಿನಾಂಕ 04-09-2023ರಿಂದ 19-12-2025ರ ಅವಧಿಯಲ್ಲಿ ಎಟಿಎಂಗೆ ನಿಗದಿತ ನಗದು ಜಮಾ ಮಾಡದೆ, ಕಡಿಮೆ ಹಣ ಜಮಾ ಮಾಡುವ ಮೂಲಕ ರೂ.70,86,000 ಮೊತ್ತವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ದಿನಾಂಕ 19-12-2025ರಂದು ಸೇಫ್ ಲಾಕರ್ ಪರಿಶೀಲನೆ ವೇಳೆ ರೂ.55,000 ಮೌಲ್ಯದ 4.400 ಗ್ರಾಂ ಚಿನ್ನ ವಂಚನೆಯಾದುದು ಬೆಳಕಿಗೆ ಬಂದಿದೆ. ಹಣದ ದುರುಪಯೋಗ ಪತ್ತೆಯಾಗುತ್ತಿದ್ದಂತೆ ಆರೋಪಿತನು ದಿನಾಂಕ 17-12-2025ರಂದು ಯಾರಿಗೂ ಮಾಹಿತಿ ನೀಡದೆ ಕೆಲಸದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.
ಒಟ್ಟು ವಂಚನೆಯ ಮೌಲ್ಯ ರೂ.71,41,000 ಆಗಿದೆ. ಈ ಕುರಿತು ಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರಾದ ಸಿ.ವಿ.ಎಸ್. ಚಂದ್ರಶೇಖರ್ (50), ಜೆಪ್ಪು, ಮಂಗಳೂರು ಅವರು ದಿನಾಂಕ 23-12-2025ರಂದು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025 ಅಡಿಯಲ್ಲಿ BNS–2023ರ ಕಲಂ 314, 316(5), 318(2)ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!