
ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಸ್ಥಗದ್ದೆ ಗ್ರಾಮದಲ್ಲಿ ಪ್ರೀತಿಸಿದ್ದ ಯುವತಿ ವಿವಾಹಕ್ಕೆ ನಿರಾಕರಿಸಿದ್ದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತ ಯುವಕನನ್ನು ಪವನ್ ಭಟ್ (24) ಎಂದು ಗುರುತಿಸಲಾಗಿದೆ. ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಇದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಅವರು ವಿವಾಹವಾಗುವಂತೆ ಒತ್ತಾಯಿಸಿದ್ದರೆನ್ನಲಾಗಿದೆ. ಆದರೆ ಯುವತಿ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪವನ್ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ಪಡೆದ ಅಂಕೋಲಾ ಪೊಲೀಸ್‌ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ಮುಂದುವರಿದಿದೆ






