ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯಲು ಹೋಗಿದ್ದ ನಾಲ್ಕು ದನಗಳನ್ನು ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ದಿನಾಂಕ 18-11-2025 ರಂದು ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರಿಗೆ ಸೇರಿದ ಒಟ್ಟು ನಾಲ್ಕು ದನಗಳು ಕಳ್ಳತನವಾಗಿರುವ ಬಗ್ಗೆ ಗಣೇಶ ರೈ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 169/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ತನಿಖೆಯ ಫಲವಾಗಿ ದಿನಾಂಕ 08-01-2026 ರಂದು ಪ್ರಕರಣದ ಆರೋಪಿ ಝುಲ್ಫಾನ್ ಮಾಲಿಕ್ (30), ಕೋಡಿ, ಉಳ್ಳಾಲ ಗ್ರಾಮ ಮತ್ತು ತಾಲೂಕು, ಮಂಗಳೂರು ಜಿಲ್ಲೆ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯದ ಆದೇಶದಂತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಈ ಸಂಬಂಧ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಟ್ಲ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!