
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷ ಸಮಾವೇಶವು ಇಂದು ಸಂಜೆ(ಜ.10) ನಗರದ ಕೋಟೆಚಾ ಸಭಾಂಗಣದಲ್ಲಿ ನಡೆಯಲಿದೆ.
ಕ್ಷೇತ್ರಾಧ್ಯಕ್ಷ ಆಶ್ರಫ್ ಬಾವು ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಹಾಗೂ ಕರ್ನಾಟಕ ರಾಜ್ಯಾಧ್ಯಕ್ಷ ಮಜೀದ್ ಮೈಸೂರು ಭಾಗವಹಿಸಲಿದ್ದಾರೆ. ಅಲ್ಲದೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಅಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಉಪಾಧ್ಯಕ್ಷ ಮೂನಿಶ್ ಅಲಿ ಬಂಟ್ವಾಳ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು ಸೇರಿದಂತೆ ಹಲವಾರು ಜಿಲ್ಲಾ ಹಾಗೂ ಕ್ಷೇತ್ರ ಮಟ್ಟದ ನಾಯಕರು ಸಮಾವೇಶದಲ್ಲಿ ಉಪಸ್ಥಿತರಿರಲಿದ್ದಾರೆ.
ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸುವುದು ಹಾಗೂ ಕಾರ್ಯಕರ್ತರಿಗೆ ಮುಂದಿನ ಹೋರಾಟದ ದಿಕ್ಕು ನೀಡುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.
ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕೆಂದು ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಸ್ಮಾನ್ ಎ.ಕೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.






