ಬೆಳ್ತಂಗಡಿ, ಜ.14: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಒಡಿಲ್ನಾಳ ಗ್ರಾಮದ ಸಂಬೋಳ್ಯದಲ್ಲಿ ನಡೆದ 15 ವರ್ಷದ ಸುಮಂತ್‌ ಅವರ ಅಸಹಜ ಸಾವು ಪ್ರಕರಣದಲ್ಲಿ ಶವಪರೀಕ್ಷೆಯ ಪ್ರಾಥಮಿಕ ವರದಿ ಮಹತ್ವದ ಅಂಶಗಳನ್ನು ಬಹಿರಂಗಪಡಿಸಿದೆ.
ಪ್ರಾಥಮಿಕ ವರದಿ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಹಾಗೂ ತಕ್ಷಣದ ಸಾವಿನ ಕಾರಣ ಮುಳುಗು ಸಾವು ಎಂದು ತಿಳಿಸಿದೆ. ಮೃತನ ತಲೆಯ ಮೇಲಿನ ಗಾಯಗಳು ಮಂದ ಬಲದ (Blunt injury) ಪರಿಣಾಮವಾಗಿದ್ದು, ಯಾವುದೇ ಚೂಪಾದ (Sharp) ಆಯುಧಗಳಿಂದ ಉಂಟಾದ ಗಾಯಗಳಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕ ಮತ್ತು ಸ್ಪಷ್ಟ ವಿವರಣೆ ಲಭ್ಯವಾಗಿಲ್ಲ.
ಈ ಹಿನ್ನೆಲೆಯಲ್ಲಿ ಪ್ರಕರಣದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ, ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ಮುಂದುವರಿಸಲಾಗಿದೆ. ಪ್ರಕರಣದ ಆಳವಾದ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ಅವರ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!