ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು–ಮೊಟಾರ್ ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಾಗಿದೆ.
ಅಮರಮುಡ್ನೂರು ಗ್ರಾಮ, ಸುಳ್ಯ ತಾಲೂಕು ನಿವಾಸಿ ಶಶಿಧರ ನಾಯ್ಕ ಅವರು ನೀಡಿದ ದೂರಿನಂತೆ, ಅವರು ಅಮರಮುಡ್ನೂರು ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಸಂಗ್ರಹ ಕಾರ್ಯ ನಿರ್ವಹಿಸುತ್ತಿದ್ದು, ದಿನಾಂಕ 09-01-2026 ರಂದು ರಾತ್ರಿ ಸುಮಾರು 7.15 ಗಂಟೆಗೆ ಜಯಪ್ರಕಾಶ್ ಎಂಬವರು ಫೋನ್ ಮೂಲಕ ಮಾಹಿತಿ ನೀಡಿದ್ದರು. ಪುತ್ತೂರಿನಲ್ಲಿ ಕೆಲಸ ಮುಗಿಸಿಕೊಂಡು ಮಾಣಿ–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ, ಸುಳ್ಯ ಕಸ್ಬಾ ಗ್ರಾಮದ ಓಡಬೈಲ್ ಬಳಿ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಚಾಲಕ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಕೆಎ 21 ಇಇ 0723 ಸಂಖ್ಯೆಯ ಮೊಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿರುವುದಾಗಿ ತಿಳಿಸಿದ್ದರು.
ತಕ್ಷಣ ಪಿರ್ಯಾಧಿದಾರರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅಪಘಾತಕ್ಕೊಳಗಾದ ಬೈಕ್ ರಸ್ತೆಯಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಕಾರಿನ ಸಂಖ್ಯೆ ಕೆಎ 21 ಜೆಡ್ 6807 ಹಾಗೂ ಬೈಕ್ ಸಂಖ್ಯೆ ಕೆಎ 21 ಇಇ 0723 ಎಂದು ತಿಳಿದುಬಂದಿದೆ.
ಗಾಯಗೊಂಡ ಜಯಪ್ರಕಾಶ್ ಅವರನ್ನು ಪಿರ್ಯಾಧಿದಾರರು ತಕ್ಷಣ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿದ ಹಿನ್ನೆಲೆಯಲ್ಲಿ ಆಂಬ್ಯುಲೆನ್ಸ್ ಮೂಲಕ ಮಂಗಳೂರು ಕೆಎಂಸಿ ಅತ್ತಾವರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ. 06/2026 ಕಲಂ 281 ಹಾಗೂ 125(a) BNS 2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!