
ಪುತ್ತೂರು:ಜ.10ರಂದು ಬಳ ಭಾಗದಿಂದ ಪಿರಿಯಾಪಟ್ಟಣದ ಕಡೆಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಪೊಲೀಸರು ಪತ್ತೆಹಚ್ಚಿ, ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಂಡಿರುವುದು ಸೂಕ್ತವಾಗಿದೆ ಎಂದು ಹಿಂದು ಜಾಗರಣ ವೇದಿಕೆ, ವಿಶ್ವ ಹಿಂದು ಪರಿಷತ್ ಹಾಗೂ ಕಿಸಾನ್ ಸಂಘದ ಮುಖಂಡರು ಅಭಿಪ್ರಾಯಪಟ್ಟರು.
ಅಕ್ರಮವಾಗಿ ಸಾಕಾಣಿಕೆಯ ನೆಪದಲ್ಲಿ ಗೋವುಗಳನ್ನು ಕಸಾಯಿಖಾನೆಗಳಿಗೆ ಸಾಗಿಸುವಂತಹ ಪ್ರಕರಣಗಳು ಪುನರಾವರ್ತನೆಯಾಗದಂತೆ ತಡೆಯಲು ಪೊಲೀಸ್ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳಿಗೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣ ಪ್ರಸನ್ನ, ಹಿಂದು ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ, ವಿಶ್ವ ಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಿಜೆಪಿ ಮಂಡಲ ಉಪಾಧ್ಯಕ್ಷ ನಾಗೇಶ್ ಟಿ.ಎಸ್. ಉಪಸ್ಥಿತರಿದ್ದರು.






