
ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿದೆ. ಟ್ರಕ್ ಗೆ ಖಾಸಗಿ ಸ್ಲೀಪರ್ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಚಿಕ್ಕಬಳ್ಳಾಪುರದ ಅಗಲಗುರ್ಕಿ ಸಮೀಪ ಘಟನೆ ನಡೆದಿದ್ದು, ಅಪಘಾತದಲ್ಲಿ 11 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್ ಕ್ಲೀನರ್ ಸೇರಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಬಸ್ ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿತ್ತು. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸುಗಮ ಸಂಸ್ಥೆಯ ಬಸ್ ಇದಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಬಸ್ ಚಾಲಕ ಪಾರಾಗಿದ್ದಾರೆ. ಹೊರ ಬರಲಾಗದೇ ಸಿಲುಕಿದ್ದ ಓರ್ವ ಪ್ರಯಾಣಿಕನ್ನು ರಕ್ಷಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






