
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಧ್ವಜರೋಹಣದೊಂದಿಗೆ ಚಾಲನೆ ನೀಡಲಾಯಿತು.
ಇಂದು ಮತ್ತು ನಾಳೆ ನಡೆಯಲಿರುವ ಈ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದಾರೆ.
ಈ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಮತ್ತು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆಯೂ ನಡೆಯಲಿದೆ.
ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನೂತನ ರಾಷ್ಟ್ರೀಯ ನಾಯಕರಿಗೆ ಜ.21ರಂದು 6:30ಕ್ಕೆ ನಗರದ ಪುರಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮೊದಲು ಅಪರಾಹ್ನ 4:30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತ (ಜ್ಯೋತಿ )ದಿಂದ ಸಮಾವೇಶ ನಡೆಯಲಿರುವ ಪುರಭವನ ವರೆಗೆ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಎಸ್ ಡಿಪಿಐ ಪತ್ರಿಕಾ ಪ್ರಕಟಣೆ ತಿಳಿಸಿದೆ.






