ಪುತ್ತೂರು ನಗರದ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋಮುಧ್ವೇಷ ಹಾಗೂ ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಪುತ್ತೂರು ನಿವಾಸಿ ರಾಮಚಂದ್ರ ಕೆ. ಅವರು ನೀಡಿದ ದೂರಿನಂತೆ, ಜನವರಿ 12, 2026ರಂದು ನಡೆದ ಕಾರ್ಯಕ್ರಮದಲ್ಲಿ ಆರೋಪಿತರಾದ ಡಾ. ಕಲ್ಲಡ ಪ್ರಭಾಕರ ಭಟ್ ಅವರು ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತೆ, ಕೋಮುಧ್ವೇಷ ಮತ್ತು ಹಿಂಸೆಗೆ ಪ್ರಚೋದಿಸುವ ಭಾಷಣ ಮಾಡಿದ್ದಾರೆ ಎನ್ನಲಾಗಿದೆ. ಸದರಿ ಭಾಷಣವನ್ನು  ಯೂಟ್ಯೂಬ್ ಚಾನಲ್‌ನಲ್ಲಿ ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಭಾಷಣ ಮಾಡಿದ ಡಾ. ಕಲ್ಲಡ ಪ್ರಭಾಕರ ಭಟ್, ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನಲ್ ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪಿರ್ಯಾದಿದಾರರು ಮನವಿ ಮಾಡಿದ್ದಾರೆ.
ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 10/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196, 299, 302, 353(2) ಹಾಗೂ 3(5) ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!