

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ಘಟಕ)ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜ.24ರಂದು ಬೆಳಿಗ್ಗೆ ಪುತ್ತೂರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶಾಸಕರಾದ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ನೂತನ ಪದಾಧಿಕಾರಿಗಳಿಗೆ ಪದಪ್ರದಾನ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಆಚಾರ್ಯ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ್ ಭಾಗವಹಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಿದ್ದಿಕ್ ನೀರಾಜೆ ಉಪಸ್ಥಿತರಿರಲಿದ್ದಾರೆ.
ಸೈಬರ್ ಅಪರಾಧ ಕುರಿತು ವಿಶೇಷ ಕಾರ್ಯಾಗಾರ
ಪದಗ್ರಹಣ ಸಮಾರಂಭದ ವಿಶೇಷ ಆಕರ್ಷಣೆಯಾಗಿ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ‘ಸೈಬರ್ ಅಪರಾಧ’ ವಿಷಯದಲ್ಲಿ ವಿಶೇಷ ಮಾಹಿತಿ ಕಾರ್ಯಾಗಾರ ನಡೆಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ನೂತನ ಪದಾಧಿಕಾರಿಗಳು
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷರಾಗಿ ಸುಧಾಕರ ಸುವರ್ಣ ತಿಂಗಳಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಿಶೇ ಕಜೆಮಾರ್, ಉಪಾಧ್ಯಕ್ಷರಾಗಿ ಕರುಣಾಕರ ರೈ ಸಿ.ಎಚ್ ಹಾಗೂ ಎಂ.ಎಸ್. ಭಟ್, ಕಾರ್ಯದರ್ಶಿಗಳಾಗಿ ಅಜಿತ್ ಕುಮಾರ್ ಮತ್ತು ನಝೀರ್ ಕೊಲ, ಕೋಶಾಧಿಕಾರಿಯಾಗಿ ಸಂಶುದ್ದೀನ್ ಸಂಪ್ಯ ಆಯ್ಕೆಯಾಗಿದ್ದಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಶಿಧರ ರೈ ಕುತ್ಯಾಳ, ಮೇಘಾ ಪಾಲೆತ್ತಾಡಿ, ಶೇಖ್ ಜೈನುದ್ದೀನ್, ಉಮಾಶಂಕರ್, ಲೋಕೇಶ್ ಬನ್ನೂರು, ಕೃಷ್ಣಪ್ರಸಾದ್, ರಾಜೇಶ್ ಪಟ್ಟೆ ಹಾಗೂ ಶರತ್ ಕುಮಾರ್ ಜಿರವರು ಪದ ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ಸುಧಾಕರ ಸುವರ್ಣ ತಿಂಗಳಾಡಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ






