

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ ವಾರ್ಷಿಕ ಜಿಲ್ಲಾ ಮಟ್ಟದ ಕ್ರೀಡಾಕೂಟವು ಜ.25ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ನಡೆಯಲಿದೆ.
ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹಾಗೂ ಕೆ.ಪಿ.ಟಿ.ಯ ಪ್ರಾಂಶುಪಾಲ ಹರೀಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಹಾಗೂ ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿರುವರು ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ






