ಬೊಳ್ವಾರ್‌ನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಗತಿ ಆಸ್ಪತ್ರೆ ವತಿಯಿಂದ ಗಣರಾಜ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಬಕಾರಿ ನಿರೀಕ್ಷಕ ಶ್ರೀ ಲೋಕೇಶ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಪಂಚದಲ್ಲೇ ಅತಿದೊಡ್ಡ ಹಾಗೂ ಶ್ರೇಷ್ಠ ಸಂವಿಧಾನ ನಮ್ಮದು. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯಿಂದ ನಡೆದುಕೊಂಡು ದೇಶದ ಏಳಿಗೆ ಹಾಗೂ ಅಭಿವೃದ್ಧಿಗೆ ತಮ್ಮ ಕೊಡುಗೆ ನೀಡಬೇಕು. ದೇಶದ ಪ್ರಗತಿಗೆ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು.
ಪ್ರಗತಿ ಶಿಕ್ಷಣ ಸಂಸ್ಥೆಗಳ ಟ್ರಸ್ಟಿ ಡಾ. ಸುಧಾ ಎಸ್. ರಾವ್ ಶುಭಾಶಯ ಕೋರಿದರು. ಪ್ರಗತಿ ಆಸ್ಪತ್ರೆಯ ಅಧ್ಯಕ್ಷ ಡಾ. ಶ್ರೀಪತಿ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಟ್ರಸ್ಟಿ ಡಾ. ಅಭೀಶ್ ವರ್ಮ, ಪ್ರಗತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶ್ರೀಮತಿ ಪ್ರೀತಾ ಹೆಗ್ಡೆ, ಪ್ರಗತಿ ನರ್ಸಿಂಗ್ ಸಂಸ್ಥೆಯ ಪ್ರಾಚಾರ್ಯೆ ಶ್ರೀಮತಿ ಹೇಮಲತಾ, ಅಲೈಡ್ ಹೆಲ್ತ್ ಸೈನ್ಸ್ ಸಂಸ್ಥೆಯ ಪ್ರಾಚಾರ್ಯೆ ಶ್ರೀಮತಿ ಮಾನಸ, ಪಾರಾಮೆಡಿಕಲ್ ಸಂಸ್ಥೆಯ ಉಪಪ್ರಾಚಾರ್ಯೆ ಶ್ರೀಮತಿ ಚೈತ್ರ, ಆಸ್ಪತ್ರೆಯ ಮಾನವ ಸಂಪನ್ಮೂಲ ವಿಭಾಗದ ಶ್ರೀಮತಿ ಉಷಾ, ವಿವಿಧ ಸಂಸ್ಥೆಗಳ ಉಪನ್ಯಾಸಕ ವೃಂದ, ಸಿಬ್ಬಂದಿಗಳು, ವಿದ್ಯಾರ್ಥಿ ನಾಯಕ ಸಂದೀಪ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಳಿಮತ್ ಶಾಹಿಮಾ ಸ್ವಾಗತಿಸಿ, ಸಪಾ ವಂದಿಸಿದರು. ಕಮರುನ್ನಿಸ ಕಾರ್ಯಕ್ರಮ ನಿರೂಪಿಸಿದರು.















