ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಮುಂಡೂರು ಗ್ರಾಮದ ನಿವಾಸಿ, ಯುವ ಕಾಂಗ್ರೆಸ್ ನಾಯಕ ಸುಪ್ರಿತ್ ಕಣ್ಣಾರಾಯ ಅವರನ್ನು ನೇಮಕ ಮಾಡಲಾಗಿದೆ.
ಸೋಮವಾರ ನಡೆದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಪ್ರಮುಖರ ಸಭೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಈ ನೇಮಕಾತಿಯನ್ನು ಘೋಷಿಸಿದರು. ಸಭೆಯಲ್ಲಿ ಒಮ್ಮತದ ನಿರ್ಣಯದ ಮೂಲಕ ಸುಪ್ರಿತ್ ಕಣ್ಣಾರಾಯ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಹಿಂದೆ ಸುಪ್ರಿತ್ ಕಣ್ಣಾರಾಯ ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಘಟಕದ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
ಸಭೆಯಲ್ಲಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಮುಂದಿನ ದಿನಗಳಲ್ಲಿ ಪುತ್ತೂರು ಬ್ಲಾಕ್, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್‌ಗಳಿಗೂ ಸಾಮಾಜಿಕ ಜಾಲತಾಣ ಘಟಕಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಅಲ್ಲದೆ ಪ್ರತಿಯೊಂದು ವಲಯ ಮತ್ತು ಬೂತ್ ಮಟ್ಟದಲ್ಲಿಯೂ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನು ನೇಮಕ ಮಾಡುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸಲಾಗುವುದು ಎಂದು ತಿಳಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!