ಸುಳ್ಯ: ಹಿಂಬದಿಯಿಂದ ಬಂದ ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ರಿಕ್ಷಾದಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಸಮೀಪ ನಡೆದಿದೆ.
ಮೃತರನ್ನು ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಚಿಟ್ಟಿಕ್ಕಾನ (62) ಎಂದು ಗುರುತಿಸಲಾಗಿದೆ.
ನಿನ್ನೆ ಮಧ್ಯಾಹ್ನ ಗ್ರಾಮ ಪಂಚಾಯತ್ ಸದಸ್ಯೆ ಅನಿತಾ ಅರ ಅವರ ತಾಯಿ ಪದ್ಮಾವತಿ ಅವರನ್ನು ಚಡವು ಎಂಬಲ್ಲಿರುವ ಮನೆಗೆ ಬಿಡಲು ಸುಂದರ ಅವರು ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ, ಮಡಿಕೇರಿ ಕಡೆಗೆ ಸಾಗುತ್ತಿದ್ದ ಕಾರು ರಾಂಗ್ ಸೈಡ್‌ನಲ್ಲಿ ವೇಗವಾಗಿ ಬಂದು ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಸುಂದರ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಿಕ್ಷಾದಲ್ಲಿದ್ದ ಪದ್ಮಾವತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಬಳಿಕ ಕಾರು ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಕಾರು ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!