ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ಅಧ್ಯಕ್ಷ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಸುನೇತ್ರಾ ಪವಾರ್ ಅವರಿಗೆ ಪದವಿ ಮತ್ತು ಪ್ರಮಾಣವಚನ ಬೋಧಿಸಿದರು. ಪ್ರಮಾಣವಚನ ಸ್ವೀಕರಿಸುವ ಮುನ್ನ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು

ಅಜಿತ್‌ ಪವಾರ್‌ ಖಾತೆಗಳೇ ಮುಂದುವರಿಕೆ
ಪ್ರಮಾಣವಚನದ ತಕ್ಷಣವೇ ಸುನೇತ್ರಾ ಪವಾರ್ ಅವರಿಗೆ ರಾಜ್ಯ ಅಬಕಾರಿ, ಕ್ರೀಡೆ ಮತ್ತು ಯುವಜನ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ಹಾಗೂ ವಕ್ಫ್‌ ಖಾತೆಗಳ ಜವಾಬ್ದಾರಿ ನೀಡಲಾಗಿದೆ. ಈ ಎಲ್ಲ ಖಾತೆಗಳನ್ನೂ ಅವರ ಪತಿ ಅಜಿತ್ ಪವಾರ್ ಈ ಹಿಂದೆ ನಿರ್ವಹಿಸುತ್ತಿದ್ದರು. ಆದರೆ ಹಣಕಾಸು ಮತ್ತು ಯೋಜನಾ ಖಾತೆಗಳನ್ನು ಇದೀಗ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ ವಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಪ್ರಮಾಣವಚನಕ್ಕೂ ಮುನ್ನವೇ ಸುನೇತ್ರಾ ಪವಾರ್ ಅವರನ್ನು ರಾಜ್ಯ ಎನ್‌ಸಿಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ಬಿಜೆಪಿ-ಶಿವಸೇನೆ-ಎನ್‌ಸಿಪಿ ಮಹಾಯುತಿ ಸರ್ಕಾರದಲ್ಲಿ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿ ಸ್ಥಾನದೊಂದಿಗೆ ಹಣಕಾಸು ಖಾತೆಯನ್ನೂ ಹೊಂದಿದ್ದರು. ಆದರೆ ಜನವರಿ 28ರಂದು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಅವರು ನಿಧನರಾದರು.

Leave a Reply

Your email address will not be published. Required fields are marked *

Join WhatsApp Group
error: Content is protected !!