
ಕಡಬ: ತಾಲೂಕಿನ ಕೋಡಿಂಬಾಳ ಗ್ರಾಮದ ಪಡೆಜ್ಜಾರು ಮುರಚೆಡವು ಬಳಿ ಕಾರೊಂದು ರಸ್ತೆ ಬದಿಯಲ್ಲಿದ್ದ ಹೈಟೆನ್ಷನ್ (H.T) ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಾನಿಗೊಳಗಾದ ಘಟನೆ ಫೆ. 4ರಂದು ಬೆಳಿಗ್ಗೆ ಸಂಭವಿಸಿದೆ.
KA-21-P-8882 ಸಂಖ್ಯೆಯ ಕಾರನ್ನು ಚಾಲನೆ ಮಾಡುತ್ತಿದ್ದ ಸೀತಾರಾಮ ಗೌಡ ಅವರು ಅಜಾಗರೂಕತೆ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ನಷ್ಟದ ಅಂದಾಜು ಮೌಲ್ಯ ₹17,500 ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಮೆಸ್ಕಾಂ ಕಡಬ ಶಾಖೆಯ ಸಹಾಯಕ ಇಂಜಿನಿಯರ್ ಸತ್ಯನಾರಾಯಣ ಸಿ.ಕೆ. ಅವರು ನೀಡಿದ ದೂರಿನ ಆಧಾರದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ. 13/2026) ದಾಖಲಾಗಿದ್ದು, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 281ರಡಿ ತನಿಖೆ ನಡೆಯುತ್ತಿದೆ






