ಮಂಗಳೂರು: ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಮಂಗಳೂರು ದಕ್ಷಿಣ ಉಪವಿಭಾಗದ ಆಂಟಿ–ಡ್ರಗ್ ತಂಡವು ನಿಷೇಧಿತ MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ದಿನಾಂಕ 07.02.2026ರಂದು ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ದಾಳಿ ನಡೆಸಿದ ವೇಳೆ ಜೋರ್ಡನ್ (21) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತನು ಜೀವನ್ ಅವರ ಪುತ್ರನಾಗಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆ ಗ್ರಾಮದ 144/B, ಎಂಎನ್‌ಪಿಎಂ ಕಾಲನಿಯ ಶಾಶ್ವತ ನಿವಾಸಿಯಾಗಿದ್ದಾನೆ. ಪ್ರಸ್ತುತ ಬಾಳೆಪುಣಿ ಗ್ರಾಮದ ಕುಕ್ಕದ ಕಟ್ಟೆ ಸೈಟ್‌ನಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ವಶದಿಂದ ಸುಮಾರು 55 ಗ್ರಾಂ MDMA ಮಾದಕ ವಸ್ತು, ಒಂದು ಮೊಬೈಲ್ ಫೋನ್ ಹಾಗೂ ಡಿಜಿಟಲ್ ತೂಕ ಮಾಪನ ಯಂತ್ರ ಸೇರಿದಂತೆ ಇತರ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 14/2026ರಡಿ NDPS ಕಾಯ್ದೆಯ ಕಲಂ 8(ಸಿ), 22(ಎ), 22(ಬಿ), 22(ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!