ರಾಯಚೂರಿನಲ್ಲಿ (Raichuru) ಸಿಎಂ ಸಿದ್ದರಾಮಯ್ಯ (CM Siddaramaiah) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ದಿಕ್ಕು ತಪ್ಪಿದ ಘಟನೆ ನಡೆದಿದೆ. ನಿಗದಿಯಾಗಿದ್ದ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿದಿಲ್ಲ. ಬದಲಿಗೆ ಮತ್ತೊಂದು ಹೆಲಿಪ್ಯಾಡ್ನಲ್ಲಿ (Helipad) ಹೆಲಿಕಾಫ್ಟರ್ನನ್ನು ಇಳಿಸಿದ್ದು, ಸಿಎಂ ಸ್ವಾಗತಕ್ಕೆ ಬಂದಿದ್ದ ಅಧಿಕಾರಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ.

ಮತ್ತೊಂದು ಹೆಲಿಪ್ಯಾಡ್ನಲ್ಲಿ ಲ್ಯಾಂಡ್

ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬರುತ್ತಿದ್ದ ಹೆಲಿಕಾಪ್ಟರ್ ದಿಕ್ಕು ತಪ್ಪಿತ್ತು ಎನ್ನಲಾಗ್ತಿದೆ. ಇತ್ತ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಕಾದು ನಿಂತು ಸುಸ್ತಾಗಿದ್ದಾರೆ.

ಓಡೋಡಿ ಬಂದ ಅಧಿಕಾರಿಗಳು

ಸಿಎಂ ಇದ್ದ ಹೆಲಿಕಾಪ್ಟರ್ ದಿಕ್ಕು ತಪ್ಪಿ ಮತ್ತೊಂದು ಹೆಲಿಪ್ಯಾಡ್ನಲ್ಲಿ ಇಳಿದ ವಿಚಾರ ತಿಳಿದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖಾ ಅಧಿಕಾರಿಗಳು. ಸಿದ್ದರಾಮಯ್ಯ ಇಳಿದ್ದ ಹೆಲಿಕಾಪ್ಟರ್ಗೆ ಓಡೋಡಿ ಬಂದಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಮದುವೆ ಕಾರ್ಯಕ್ರಮಕ್ಕೆ ಬರ್ತಿದ್ದ ಸಿಎಂ

ಲಿಂಗಸೂಗೂರು ಪಟ್ಟಣದಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ ಮೊಮ್ಮಗನ ಮದುವೆಗೆಂದು ಸಿಎಂ ಸಿದ್ದರಾಮಯ್ಯ ಆಗಮಿಸಿದ್ರು. ರಾಯಚೂರು ರಸ್ತೆಯ ಶ್ರೀನಿವಾಸ್ ಲೇಔಟ್ ನಲ್ಲಿ ಸಿಎಂ,‌ ಡಿಸಿಎಂ, ಹಾಗೂ ಸಚಿವರಿಗಾಗಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿತ್ತು.

ಸಿಎಂ ಸಿದ್ದರಾಮಯ್ಯ ಅವರೇ ಸೂಚಿಸಿದ್ರಾ?

ಆದ್ರೆ ಹೆಲಿಕಾಪ್ಟರ್ ದಿಕ್ಕು ತಪ್ಪಿ ಬಿಜೆಪಿ ಶಾಸಕ ಮಾನಪ್ಪ ವಜ್ಜಲ್ ಅವರ ಖಾಸಗಿ ಹೆಲಿಪ್ಯಾಡ್ ನಲ್ಲಿ ಇಳಿದಿದೆ. ಇತ್ತ ಡಿಸಿಎಂ ಈ ಹೆಲಿಪ್ಯಾಡ್ ನಲ್ಲಿದ್ದಾರೆ ಎಂದು ತಿಳಿದು ಬೇರೆ ಕಡೆ ಇಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರೇ ಸೂಚಿಸಿದ್ರಾ ಎಂಬ ಚರ್ಚೆ ಕೂಡ ನಡೆದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಕೂಡ ಮದುವೆಗೆ ಬಂದಿದ್ದಾರೆ. ಡಿಕೆಶಿ ಇಳಿದ ಅದೇ ಹೆಲಿಪ್ಯಾಡ್ ನಲ್ಲಿ ಸಿಎಂ ಹೆಲಿಕಾಪ್ಟರ್ ಸಹ ಒಂದೆರಡು ನಿಮಿಷದಲ್ಲಿ‌ ಲ್ಯಾಂಡ್ ಆಗಬೇಕಿತ್ತು. ಅಷ್ಟರಲ್ಲೇ ಸಿಎಂ ಇದ್ದ ಹೆಲಿಕಾಪ್ಟರ್ ಬೇರೆ ಹೆಲಿಪ್ಯಾಡ್ ಕಡೆಗೆ ಮುಖ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!