ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ (ಫೆ. 9) ಬೆಳಿಗ್ಗೆ ಸುಮಾರು 8.30ರ ವೇಳೆಗೆ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ 16 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಘಟನೆ ವರದಿಯಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ತನ್ನ ಮನೆಯಿಂದ ಸುಮಾರು 300 ಮೀಟರ್ ದೂರ ಸಾಗುತ್ತಿದ್ದ ವೇಳೆ ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ವ್ಯಕ್ತಿಗಳು ಆಕೆಯನ್ನು ತಡೆದಿದ್ದಾರೆ. ಅಪಹರಣಕ್ಕೆ ಯತ್ನಿಸಿದ ಸಂದರ್ಭದಲ್ಲಿ ಬಾಲಕಿ ಪ್ರತಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಚಾಕುವಿನಿಂದ ಎಡ ಕೈಗೆ ನಾಲ್ಕು ಬಾರಿ ಇರಿದಿದ್ದಾರೆ ಎನ್ನಲಾಗಿದೆ.
ಗಾಯಗಳು ಮೇಲ್ಮಟ್ಟದಲ್ಲಿದ್ದು, ಹೊಲಿಗೆ ಅಗತ್ಯವಾಗಿಲ್ಲ ಎಂದು ತಿಳಿದುಬಂದಿದೆ. ಬಳಿಕ ಬಾಲಕಿ ಪೋಷಕರೊಂದಿಗೆ ಠಾಣೆಗೆ ಹಾಜರಾಗಿ ದೂರು ನೀಡಿದ್ದಾಳೆ.
ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!