

ಪುತ್ತೂರು: ಪಾರಾದೀಪ್ ಪಾಸ್ಟೇಟ್ಸ್ ಲಿಮಿಟೆಡ್, ಪಣಂಬೂರು–ಮಂಗಳೂರು, ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ–ಮಂಗಳೂರು ಹಾಗೂ ತ್ರಿಶೂಲ್ ಫ್ರೆಂಡ್ಸ್ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ಮತ್ತು ಚರ್ಮರೋಗ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಫೆಬ್ರವರಿ 15, ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಶಿಬಿರದಲ್ಲಿ ನೇತ್ರ ತಜ್ಞರಿಂದ ಕಣ್ಣಿನ ತಪಾಸಣೆ ಮತ್ತು ಸಲಹೆ, ಅಗತ್ಯವಿರುವವರಿಗೆ ಉಚಿತ ಶಸ್ತ್ರಚಿಕಿತ್ಸೆ ವ್ಯವಸ್ಥೆ (ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ), ಸಕ್ಕರೆ ಕಾಯಿಲೆಗೆ ರಕ್ತ ಪರೀಕ್ಷೆ (ಮೊದಲ 20 ಮಂದಿಗೆ), ರಕ್ತದ ಒತ್ತಡ ಪರೀಕ್ಷೆ, ಉಚಿತ ಕನ್ನಡಕ ವಿತರಣೆ ಹಾಗೂ ಚರ್ಮರೋಗ ತಪಾಸಣೆ ಮತ್ತು ಚಿಕಿತ್ಸೆ ಸೌಲಭ್ಯಗಳು ಲಭ್ಯವಿರುತ್ತವೆ.
ಆಸಕ್ತ ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಸಂಘಟಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8746844989 ಮತ್ತು 9071358521 ಸಂಪರ್ಕಿಸಬಹುದು.







