ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೇ ಸೇತುವೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ 8 ಕೋಟಿ ರೂ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಪುತ್ತೂರು ಉಪ್ಪಿನಂಗಡಿ ರಸ್ತೆ ಚತುಷ್ಪಥವಾಗಿ ಅಭಿವೃದ್ದಿ ಹೊಂದುತ್ತಿದ್ದು ಈಗಾಗಲೇ ಕಾಮಗಾರಿ ಪ್ರಾರಂಭಗೊಂಡಿದ್ದು,ರಸ್ತೆ ಅಗಲೀಕರಣವೂ ನಡೆಯುತ್ತಿದೆ. ಹಾರಾಡಿಯಲ್ಲಿ ಕಿರಿದಾದ ರೈಲ್ವೇ ಸೇತುವೆಯು ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿತ್ತು. ಈ ಹಿನ್ನೆಲೆಯಲ್ಲಿ ರೈಲ್ವೇ ಸೇತುವೆ ನಿರ್ಮಾಣ‌ಮಾಡುವ ಬಗ್ಗೆ ಅನುದಾನ ಕೋರಿ ಶಾಸಕರು ಮನವಿ ಮಾಡಿದ್ದರು. ಲೋಕೋಪಯೋಗಿ ಇಲಾಖೆಯಿಂದ 8 ಕೋಟಿ ರೂ ಅನುದಾನ ಮಂಜೂರಾಗಿದೆ. ಶೀಘ್ರದಲ್ಲೇ ಕಾಮಗಾರಿಯೂ ಪ್ರಾರಂಭವಾಗಲಿದೆ ಎಂದು ಶಾಸಕರು ತಿಳಿಸಿದ್ದಾರೆ.

ಪುತ್ತೂರು ಉಪ್ಪಿನಂಗಡಿ ರಸ್ತೆ ಚತುಷ್ಫಥವಾಗಿ ಅಭಿವೃದ್ದಿ ಹೊಂದುತ್ತಿದೆ. ಈ ರಸ್ತೆಯ ಹಾರಾಡಿಯಲ್ಲಿರುವ ರೈಲ್ವೇ ಸೇತುವೆ ಅಗಲ ಕಿರಿದಾಗಿರುವ ಕಾರಣ ಅಭಿವೃದ್ದಿಗೆ ಅಡ್ಡಿಯಾಗಿತ್ತು. ಕೆಲ ತಿಂಗಳ ಹಿಂದೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಕರೆಸಿ ಸೇತುವೆಯ ವೀಕ್ಷಣೆ ಮಾಡಿಸಿದ್ದೆ. ಹೊಸ ಸೇತುವೆ ನಿರ್ಮಾಣಕ್ಕೆ 8 ಕೋಟಿ ರೂ ಅನುದಾನ ಮಂಜೂರಾಗಿದೆ.ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಪುತ್ತೂರಿನ ಅಭಿವೃದ್ದಿಗೆ ಇದೊಂದು ಮೈಲಿಗಲ್ಲು ಆಗಲಿದೆ.

ಅಶೋಕ್ ರೈ ಶಾಸಕರು,ಪುತ್ತೂರು

Leave a Reply

Your email address will not be published. Required fields are marked *

Join WhatsApp Group
error: Content is protected !!