ಧರ್ಮಸ್ಥಳ: 2017ರಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಕಳೆದ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ನಂಜುಂಡ (ಮಾಗಡಿ, ಬೆಂಗಳೂರು)ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ದಿನಾಂಕ 08-04-2017 ರಂದು ರೆಖ್ಯಾ ಪ್ರದೇಶದಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2017ರಡಿ ಐಪಿಸಿ ಕಲಂ 395, 397 ಹಾಗೂ 34ರಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದನು.
ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಬೆಂಗಳೂರಿನ ಗಿಡ್ಡೆನಹಳ್ಳಿ ಪ್ರದೇಶದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಯಿತು. ಫೆ. 13, 2026 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!