ಬೆಳ್ತಂಗಡಿ: ಹಲ್ಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
2013ರ ನವೆಂಬರ್ 11ರಂದು ಪಿರ್ಯಾದಿದಾರರಾದ ಚಿತ್ರಶೇಖರ ಮಡಂತ್ಯಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಆಲ್ವಿನ್ ರೊಡ್ರಿಗಸ್ (53), ಪಾರೆಂಕಿ ಗ್ರಾಮ, ಬೆಳ್ತಂಗಡಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 65/2013ರಡಿ ಐಪಿಸಿ ಕಲಂ 324 ಮತ್ತು 504ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರಿನ ಸಂಪಿಗೆ ರಾಮನಗರ ಪ್ರದೇಶದಲ್ಲಿ ಪೊಲೀಸರು ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!