ಪುತ್ತೂರು: ಮಾನ್ಯ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯ ಅ.ಕ್ರ. 51/2012 ಹಾಗೂ 52/2012 ಪ್ರಕರಣಗಳ ಆರೋಪಿಯಾಗಿರುವ ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55), ಪ್ರಸ್ತುತ ಮಂಗಳೂರು ಪದವು ಪ್ರದೇಶದಲ್ಲಿ ವಾಸವಾಗಿದ್ದನು. ಈತನನ್ನು ಮಂಗಳೂರು ನಗರದ ಕುಲಶೇಖರ–ಬಿಕರ್ನಕಟ್ಟೆ ಪ್ರದೇಶದಲ್ಲಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಫೆ. 27, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದಲ್ಲದೆ, ಮಾನ್ಯ ನ್ಯಾಯಾಲಯದಲ್ಲಿ ಷರತ್ತುಬದ್ಧ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ. 18/2026, ಕಲಂ 269 BNS–2023 ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!