ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್ (48) ಅವರು ರವಿವಾರ ಹೃದಯಾಘಾತದಿಂದ ನಿಧನರಾದರು.
ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಅಂಗವಾಗಿ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ತಕ್ಷಣ ಅಲ್ಲಿದ್ದವರು ಅವರನ್ನು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಬ್ಬಂದಿ ಸಂದೀಪ್ ಅವರ ಕಾರಿನಲ್ಲಿ ಇತರರು ಸೇರಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದರು.
ರವಿಕುಮಾರ್ ಕಲ್ಕಾರ್ ಅವರು ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿಯ ಸದಸ್ಯರಾಗಿ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಅವರು ಪತ್ನಿ ಪವಿತ್ರ (ಕೆಪಿಟಿಸಿಎಲ್‌ನಲ್ಲಿ ಕಿರಿಯ ಅಭಿಯಂತರ), ಪುತ್ರಿ ರನ್ನಿ, ಪುತ್ರ ರವೀಶ್‌, ಸಹೋದರ ದಿನೇಶ್ ಕಲ್ಕಾರ್ ಹಾಗೂ ಸಹೋದರಿಯರನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!