ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಹಿನ್ನೆಲೆ, ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಸಂಭ್ರಮಾಚರಣೆ ನಡೆಸಿದರು.
ಎಂ.ಕೆ. ಫೈಝಿಯನ್ನು ಇಡಿ (ED) ಕಳೆದ ವರ್ಷ ಪ್ರಕರಣದ ಸಂಬಂಧ ಬಂಧಿಸಿತ್ತು. ಇದೀಗ ಹೈಕೋರ್ಟ್ ಜಾಮೀನು ನೀಡಿರುವುದಾಗಿ ಪಕ್ಷದ ನಾಯಕರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪುತ್ತೂರಿನ ಬಸ್ ನಿಲ್ದಾಣದ ಬಳಿ ಸೇರಿದ್ದ ಎಸ್‌ಡಿಪಿಐ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಾತನಾಡಿದ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಪ್ರಕರಣದಲ್ಲಿ ನ್ಯಾಯ ದೊರೆತಿರುವುದು ಸತ್ಯದ ಜಯಕ್ಕೆ ಉದಾಹರಣೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನಸಭಾ ಕ್ಷೇತ್ರ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್, ಸಮಿತಿ ಸದಸ್ಯರಾದ ಸಿರಾಜ್ ಕೂರ್ನಡ್ಕ, ಯಹ್ಯಾ ಕೆ.ಎಚ್., ಕಬಕ ಬ್ಲಾಕ್ ಅಧ್ಯಕ್ಷ ಸಿದ್ದೀಕ್ ಉರಿಮಜಲು, ಕಾರ್ಯದರ್ಶಿ ಅದ್ದು ಕೊಡಿಪ್ಪಾಡಿ, ನಗರ ಸಮಿತಿ ಉಪಾಧ್ಯಕ್ಷ ಸಮೀರ್ ನಾಜೂಕು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!