ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಪರೀಕ್ಷೆಗೆ ಮೊದಲೇ ಫಲಿತಾಂಶ ದಿನಾಂಕ ಘೋಷಣೆ ಮಾಡಿದೆ.

ಫೆಬ್ರವರಿ 28 ರಿಂದ ಮಾರ್ಚ್ 17ರವರೆಗೆ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -1 ನಡೆಯಲಿದ್ದು, ಏಪ್ರಿಲ್ 7ರಂದು ಫಲಿತಾಂಶ ಪ್ರಕಟಿಸಲಾಗುವುದು.

ಮಾರ್ಚ್ 18ರಿಂದ ಏಪ್ರಿಲ್ 2 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ-1 ನಡೆಯಲಿದ್ದು, ಏಪ್ರಿಲ್ 24ಕ್ಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದಾರೆ.

ಮಂಡಲಿಯ ಜಾಲತಾಣದಲ್ಲಿನ Student Corner ಅಡಿಯಲ್ಲಿ ಪರೀಕ್ಷೆಗೆ ತಯಾರು Blueprint, Model Question Papers, Exhaustive Question Bank, Previous year Question Papers along with Key answers and centum papers ಗಳನ್ನು ಲಭ್ಯಗೊಳಿಸಲಾಗಿದೆ.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ವೃದ್ಧಿಗಾಗಿ ಇಲಾಖೆಯ ಹಂತದಲ್ಲಿ ಕಾರ್ಯಗಾರಗಳು ಮತ್ತು ಸಭೆಗಳನ್ನು ನಿರಂತರವಾಗಿ ನಡೆಸಲಾಗಿದೆ.

ಪೋಷಕರ ಸಭೆಗಳನ್ನು ನಡೆಸಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯನ್ನು ಪೋಷಕರಿಗೆ ತಿಳಿಸಲಾಗಿದೆ.

2025-26ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗಿದೆ.

ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳ ನೋಂದಣಿಗೆ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇದೇ ಮೊದಲಬಾರಿಗೆ ಅವಕಾಶ ನೀಡಲಾಗಿತ್ತು.

ಖಾಸಗಿ ಅಭ್ಯರ್ಥಿಗಳು ತಾವು ಅಯ್ಕೆ ಮಾಡಿಕೊಂಡ ತಾಲ್ಲೂಕಿನಲ್ಲಿ ಲಭ್ಯವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು/ ಶಾಲೆಗಳಿಗೆ ಮಂಡಲಿಯಿಂದ randamise ಅಗಿ ಹಂಚಿಕೆ ಮಾಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಅಂತಿಮ ಪ್ರವೇಶ ಪತ್ರಗಳನ್ನು ಲಭ್ಯಗೊಳಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಮಾರ್ಚ್ ಮೊದಲ ವಾರದಲ್ಲಿ ಅಂತಿಮ ಪ್ರವೇಶ ಪತ್ರಗಳನ್ನು ನೀಡಲಾಗುವುದು.

ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ತೋರಿಸಿದಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ವೆಬ್ ಕ್ಯಾಸ್ಟಿಂಗ್ ಮುಖಾಂತರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವೀಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷೆ ನಡೆಸಲು ಬೇಕಾಗಿರುವ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು.

ಪರೀಕ್ಷಾ ದಿನಗಳಂದು ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದರಿಂದ, ನಿಷೇಧಿತ ಪ್ರದೇಶದಲ್ಲಿ ಜೆರಾಕ್ಸ್/ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚಿಸಲು ಕ್ರಮವಹಿಸಲಾಗುವುದು.

ಸಾಮಾಜಿಕ ಜಾಲತಾಣದ ಮೂಲಕ ಉದಾಹರಣೆಗೆ ವಾಟ್ಸಾಪ್/ಟೆಲಿಗ್ರಾಮ್/ಇನ್ಸಾಗ್ರಾಮ್/ಫೇಸ್‌ಬುಕ್/ಯೂಟ್ಯೂಬ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಹಿತಿಯನ್ನು ಹಬ್ಬಿಸಿ ಅಥವಾ ನಕಲಿ ಪ್ರಶ್ನೆ ಪತ್ರಿಕೆಗಳ ಮೂಲಕ ಆರ್ಥಿಕ ಲಾಭಕ್ಕಾಗಿ ವಹಿವಾಟುಗಳನ್ನು ನಡೆಸುವ ವ್ಯಕ್ತಿಗಳು ಮತ್ತು ಅವರ ಅಕೌಂಟ್‌ಗಳನ್ನು ಸಹ ನಿರ್ಬಂಧಿಸಲಾಗುವುದು ಮತ್ತು ಅವರುಗಳ ಮೇಲೆ ಹಾಗೂ ಪ್ರಶ್ನೆಪತ್ರಿಕೆಗಳ ಸೋರಿಕೆಯಂತಹ ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಶಿಕ್ಷಣ ಕಾಯ್ದೆ ಅಡಿಯಲ್ಲಿ ಅಗತ್ಯ ಕ್ರಮವಹಿಸಲಾಗುವುದು.

ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅರೆ ಸರ್ಕಾರಿ ಪತ್ರಗಳ ಮೂಲಕ ಅಗತ್ಯಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಪರೀಕ್ಷೆಗಳ ಪೂರ್ವ ತಯಾರಿಯನ್ನು ಜಿಲ್ಲಾ ಹಂತದಲ್ಲಿ ಮಾಡಿಕೊಳ್ಳಲು ಜಿಲ್ಲಾ ಉಪನಿರ್ದೇಶಕರು (ಆಡಳಿತ), (ಅಭಿವೃದ್ಧಿ) ಮತ್ತು (ಪದವಿ ಪೂರ್ವ) ರವರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದು ಮತ್ತು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!