
ಮಲ್ಪೆ ಫೆ.17: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನ ನೌಕರರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.
ಪಶ್ಚಿಮ ಬಂಗಾಲ ಮೂಲದ ಪ್ರಸ್ತುತ ಕೇರಳ ರಾಜ್ಯದ ಇಡುಕಿ ಜಿಲ್ಲೆಯ ಮರಾಯು ಗ್ರಾಮದ ಆಲಿಫ್ ಇಸ್ಲಾಮ್(21) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಈ ಹಿಂದೆ 2025ರ ಡಿ.21ರಂದು ಗುಜರಾತ್ ರಾಜ್ಯದ ಹೀರೇಂದ್ರ ಕುಮಾರ್ (34) ಹಾಗೂ 2025ರ ನ.21ರಂದು ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು.







