
ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ ಸಿಗರೇಟ್ ಸೇದುತ್ತಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಫೆ.17, 2026ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿರುವ ಕುರಿತು ಸಾರ್ವಜನಿಕರಿಂದ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಸುರೇಶ್ ಸಿ.ಟಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದರು.
ವಿಚಾರಣೆಯಲ್ಲಿ ಮಹಮ್ಮದ್ ಮೋಹಾದ್ ಎಸ್ (33), ವಿಟ್ಲ ಪಡ್ನೂರು ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಎಂಬುದು ತಿಳಿದುಬಂದಿದೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.







